Pradhan Mantri Jeevan Jyoti Vima Yojana : ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಉಜ್ವಲ ಯೋಜನೆ (Pradhan Mantri Ujwala Yojana Ujwala Yojana) ಬಗ್ಗೆ ಮಾಹಿತಿ
ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆಯನ್ನು ಕೇಂದ್ರ ಸರ್ಕಾರ 2015ರ ಮೇ ತಿಂಗಳ 9ರಂದು ಜಾರಿಗೆ ತಂದಿತ್ತು. ಜೀವ ವಿಮೆಯ ಪ್ರಯೋಜನವನ್ನು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ವಿಸ್ತರಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ಈ ಯೋಜನೆಯಲ್ಲಿ ಟರ್ಮ್ ಇನ್ಷೂರೆನ್ಸ್ ಯೋಜನೆಯಿದೆ.
ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆಯಲ್ಲಿ (Pradhan Mantri Jeevan Jyoti Vima Yojana) ಹಣ ತೊಡಗಿಸಿದ ನಂತರ ಅಕಸ್ಮಾತ್ ಒಬ್ಬ ವ್ಯಕ್ತಿ ಮೃತಪಟ್ಟರೆ ಅವರ ಕುಟುಂಬಕ್ಕೆ 2 ಲಕ್ಷ ರೂಪಾಯಿಗಳ ನೆರವು ನೀಡಲಾಗುತ್ತದೆ. ಇದರಲ್ಲಿ ನೀವು ವಾರ್ಷಿಕ ಪ್ರೀಮಿಯಂ ಪಾವತಿಸಬೇಕಾಗುತ್ತದೆ, ಇತರ ಅಸ್ತಿತ್ವದಲ್ಲಿರುವ ವಿಮಾ ಯೋಜನೆಗಳಿಗೆ ಹೋಲಿಸಿದರೆ ಇದು ಅತ್ಯಂತ ಕಡಿಮೆ ಪ್ರೀಮಿಯಂ ಯೋಜನೆಯಾಗಿದೆ.
ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಯು ಬ್ಯಾಂಕ್ ಗಳಿಂದ ನಿರ್ವಹಿಸಲ್ಪಡುತ್ತದೆ ಹಾಗೂ ಈ ವಿಮಾ ಪಾಲಿಸಿಗಳನ್ನ ಬ್ಯಾಂಕ್ ಖಾತೆದಾರರಿಗೆ ಮಾತ್ರ ನೀಡಲಾಗುತ್ತದೆ. ಈ ವಿಮಾ ಯೋಜನೆಯನ್ನು ಖರೀದಿ ಮಾಡಲು ಯಾವುದೇ ವೈದ್ಯಕೀಯ ಪರೀಕ್ಷೆಯ ಅಗತ್ಯವಿಲ್ಲ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆಯಡಿ ವಿಮೆಗೆ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ 50 ವರ್ಷ ಮತ್ತು ಪಾಲಿಸಿಯ ಮೆಚ್ಯುರಿಟಿ ವಯಸ್ಸು 55 ವರ್ಷವಾಗಿದೆ. ಈ ಯೋಜನೆಯಡಿ ವಾರ್ಷಿಕ ಪ್ರೀಮಿಯಂ 330 ರೂಪಾಯಿಯಾಗಿದ್ದು, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟ್ ಪರಿಶೀಲಿಸಿ. https://www.jansuraksha.gov.in
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮಹತ್ವ:
2016ರ ಮೇ ತಿಂಗಳ 1 ನೇ ತಾರೀಕಿನಂದು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಜಾರಿಗೆ ತಂದಿತ್ತು. ಕೇಂದ್ರ ಸರ್ಕಾರದ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಸಹಯೋಗದಲ್ಲಿ ಈ ಯೋಜನೆ ಜಾರಿಯಾಗುತ್ತಿದೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯು ಕೇಂದ್ರ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಗ್ಯಾಸ್ ಸಂಪರ್ಕವನ್ನ ನೀಡುತ್ತದೆ. ಮಹಿಳೆಯರಿಗೆ ಅಡುಗೆ ಮಾಡಲು ಯಾವುದೇ ತೊಂದರೆಯಾಗಬಾರದು ಎನ್ನುವ ಉದ್ದೇಶದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಎಲ್ಲ ಕುಟುಂಬಗಳಿಗೆ ಗ್ಯಾಸ್ ಸಂಪರ್ಕ ಕಲ್ಪಿಸಲಾಗಿದೆ ಹಾಗೂ ಗ್ಯಾಸ್ ಸಂಪರ್ಕದ ಜೊತೆಗೆ ಸಬ್ಸಿಡಿಯನ್ನೂ ನೀಡಲಾಗುತ್ತದೆ. ಈ ಸಬ್ಸಿಡಿ ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ, ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ಸರ್ಕಾರ ಆರ್ಥಿಕ ನೆರವು ನೀಡುತ್ತಿದೆ. ಇದರಲ್ಲಿ 1600 ರೂಪಾಯಿ ಹಣವನ್ನ ಎಲ್ ಪಿಜಿ ಗ್ಯಾಸ್ ಸಂಪರ್ಕಗಳನ್ನ ಖರೀದಿಸಲು ಒದಗಿಸಲಾಗುತ್ತದೆ.
ಪಿಎಂ ಉಜ್ವಲಾ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಈ ವೆಬ್ ಸೈಟ್ ಗೆ ಭೇಟಿ ನೀಡಿ. https://bit.ly/2MMCj0B
Important Information For Farmers 2023 : ರೈತರೇ ಇಲ್ಲಿದೆ ನೋಡಿ ನೀವು ತಿಳಿಯಲೇಬೇಕಾದ ಮಹತ್ವದ ಮಾಹಿತಿ
ಇದೆ ತರಹದ ಕೃಷಿಗೆ ಸಂಬಂಧ ಪಟ್ಟಂತಹ ಮತ್ತಷ್ಟು ಮಾಹಿತಿಗಾಗಿ ನಮ್ಮ ನೇಗಿಲ ಯೋಗಿ ಅಪ್ ಡೌನ್ಲೋಡ್ ಮಾಡಿ.
ಮತ್ತು ಕೃಷಿ ಗೆ ಸಂಬಂಧಿಸಿದಂತಹ ಎಲ್ಲ ಬಗೆಯ ಮಹಿತಿಯನ್ನ ತಕ್ಷಣಕ್ಕೆ ನಿಮ್ಮ ಮೊಬೈಲ್ ನಲ್ಲಿಯೇ ಪಡೆದುಕೊಳ್ಳಿ.